ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಲ್ಲಿ ಜಮಾವಣೆಯಾದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜ್ಞಾನೇಶಕುಮಾರ್ ರಾಜೀನಾಮೆಗೆ ಆಗ್ರಹಿಸಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಲು ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆಯನ್ನು ರಸ್ತೆ ಮಧ್ಯದಲ್ಲಿಯೇ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಸರ್ ಸಿದ್ದಪ್ಪ ಕಂಬಳಿ ವೃತ್ತದಲ್ಲಿಯೇ ಪೊಲೀಸರು ಬ್ಯಾರಿಕೇಡ್ ಹಾಕಿ ಕಾರ್ಯಕರ್ತರನ್ನು ತಡೆದಿದ್ದು, ಈ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನೂಕಾಟ ನಡೆದಿದೆ.
ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ತಡೆಯಲು ಪೊಲೀಸರು ನೂರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಎಲ್ಲಾ ಕಾರ್ಯಕರ್ತರನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕ್ಷಣ ಕ್ಷಣದ ಸುದ್ದಿಗಾಗಿ ನೋಡ್ತಾ ಇರಿ ಈ ಟಿವಿ 24X7.