ಹುಬ್ಬಳ್ಳಿ ನಗರದ ಹೃದಯ ಭಾಗ ಚೆನ್ನಮ್ಮ ಸರ್ಕಲ್ ಹಾಗೂ ಜನತಾ ಬಜಾರ್ ಸುತ್ತಮುತ್ತ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಮಹಿಳೆಯೊಬ್ಬರು ಹಗಲು ರಾತ್ರಿ ಎನ್ನದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಇದರಿಂದ ಸ್ಥಳೀಯರಿಗೆ ತೊಂದರೆ ಆಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಇಷ್ಟೆಲ್ಲ ನಡೆಯುತ್ತಿದ್ದರೂ ಹುಬ್ಬಳ್ಳಿ ಪೊಲೀಸರಿಗೆ, ಅಬಕಾರಿ ಇಲಾಖೆಗೆ ಇದು ಗೊತ್ತಿಲ್ವಾ? ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ದಾಳಿ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಜನ ಆಗ್ರಹಿಸಿದ್ದಾರೆ.