ದೆಹಲಿ ಕಟ್ಟಡ ಕುಸಿತ: 5 ವಿದ್ಯಾರ್ಥಿಗಳ ಸಾವಿಗೆ ಕಾರಣ ಯಾರು?; ಪ್ರಧಾನಿ ಮೋದಿಗೆ ಅಭಿಜೀತ್ ದೀಪ್ಕೆ ಪ್ರಶ್ನೆ
ಸೆಪ್ಟೆಂಬರ್ 6ರಂದು ರಾಜಧಾನಿ ದೆಹಲಿಯಲ್ಲಿ ಒಂದು ದೊಡ್ಡ ಅನಾಹುತ ಸಂಭವಿಸಿದೆ. ಭಾನುವಾರ ಮಧ್ಯಾಹ್ನ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಬಾಲಕರ ಪಿಜಿಯೊಂದು ಇದ್ದಕ್ಕಿದ್ದಂತೆ ಕುಸಿದಿದ್ದು ಐವರು ಸಾವನ್ನಪ್ಪಿದ್ದಾರೆ.
ನವದೆಹಲಿ: ಸೆಪ್ಟೆಂಬರ್ 6ರಂದು ರಾಜಧಾನಿ ದೆಹಲಿಯಲ್ಲಿ ಒಂದು ದೊಡ್ಡ ಅನಾಹುತ ಸಂಭವಿಸಿದೆ. ಭಾನುವಾರ ಮಧ್ಯಾಹ್ನ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಬಾಲಕರ ಪಿಜಿಯೊಂದು ಇದ್ದಕ್ಕಿದ್ದಂತೆ ಕುಸಿದಿದ್ದು ಐವರು ಸಾವನ್ನಪ್ಪಿದ್ದಾರೆ. ಅಲ್ಲದೆ ಹಲವು ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿದ್ದು ರಕ್ಷಣಾ ಕಾರ್ಯಾಚರಣೆ ಬರದಿಂದ ಸಾಗಿದೆ. ಕಟ್ಟಡವು ಬಾಲಕರ ವಸತಿಗೃಹವಾಗಿದ್ದರಿಂದ ಹಲವಾರು ವಿದ್ಯಾರ್ಥಿಗಳು ತಂಗಿದ್ದರು ಎಂದು ವರದಿಯಾಗಿದೆ. ಆದ್ದರಿಂದ, ಅನೇಕ ವಿದ್ಯಾರ್ಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದು ಎಂಬ ಭಯವಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಆಗಮಿಸಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.
ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಕುಸಿತದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ದೆಹಲಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಇದು ಹೇಗೆ ಸಂಭವಿಸಿತು ಎಂಬುದನ್ನು ವಿವರಿಸುತ್ತಾರೆಯೇ?" ಎಂದು ದೀಪ್ಕೆ ತಮ್ಮ ಪೋಸ್ಟ್‌ನಲ್ಲಿ ಕೇಳಿದ್ದಾರೆ. ಒಂದು ದಿನ ಹಿಂದೆ ಪ್ರಧಾನಿ ದೆಹಲಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದರು. ತಮ್ಮ ಭೇಟಿಯ ಸಮಯದಲ್ಲಿ, ಅವರು ರಾಜಕೀಯ ಭಾಷಣ ಮಾಡಿದ್ದು ಧಿಮಾಗಿ ನಕ್ಸಲರು ಎಂಬಂತಹ ಪದಗಳನ್ನು ಬಳಸಿದರು. ಆದರೆ ದೇಶದ ಶಿಕ್ಷಣ ಸಂಸ್ಥೆಗಳಲ್ಲಿನ ಕಟ್ಟಡಗಳು ಮತ್ತು ಮೂಲಸೌಕರ್ಯಗಳ ಸ್ಥಿತಿಯ ಬಗ್ಗೆ ಹೆಚ್ಚಿನ ಚರ್ಚೆ ನಡೆದಿಲ್ಲ. ಇಂದು ದಕ್ಷಿಣ ಕ್ಯಾಂಪಸ್‌ನಲ್ಲಿ ಹಾಸ್ಟೆಲ್ ಕಟ್ಟಡ ಕುಸಿದಿದೆ. ಅನೇಕ ವಿದ್ಯಾರ್ಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದು ಎಂಬ ಭಯವಿದೆ. ಈ ಅಪಘಾತದಲ್ಲಿ ಎಷ್ಟು ಜನರು ಸಾವನ್ನಪ್ಪಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
Delhi Building Collapse: ಸಾವಿನ ಸಂಖ್ಯೆ 5ಕ್ಕೆ ಏರಿಕೆ; ಮೂವರ ಸ್ಥಿತಿ ಗಂಭೀರ, ಇನ್ನೂ 40ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ, ತನಿಖೆಗೆ ಸಮಿತಿ ರಚನೆ!
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಸತ್ಯ ನಿಕೇತನ ಕಟ್ಟಡ ಕುಸಿತದಿಂದ ನಾನು ತೀವ್ರ ಕಳವಳಗೊಂಡಿದ್ದೇನೆ. ಡಿಡಿಎಂಎ, ಎನ್‌ಡಿಆರ್‌ಎಫ್, ದೆಹಲಿ ಅಗ್ನಿಶಾಮಕ ಸೇವೆ, ದೆಹಲಿ ಪೊಲೀಸ್, ಎಂಸಿಡಿ ಮತ್ತು ನಾಗರಿಕ ರಕ್ಷಣಾ ತಂಡಗಳು ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿವೆ. ಮುನ್ನೆಚ್ಚರಿಕೆಯಾಗಿ, ಪಕ್ಕದ ಕಟ್ಟಡವನ್ನು ಸ್ಥಳಾಂತರಿಸಲಾಗಿದೆ. ಅವಶೇಷಗಳಲ್ಲಿ ಸಿಲುಕಿರುವವರನ್ನು ಸುರಕ್ಷಿತವಾಗಿ ರಕ್ಷಿಸಲು ಮತ್ತು ಪೀಡಿತ ಕುಟುಂಬಗಳಿಗೆ ತಕ್ಷಣದ ಸಹಾಯವನ್ನು ಒದಗಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಮತ್ತು ಎಲ್ಲಾ ಸಂಬಂಧಿತ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ. ಪ್ರತಿಯೊಬ್ಬ ನಾಗರಿಕರ ಸುರಕ್ಷತೆ ಮತ್ತು ಯೋಗಕ್ಷೇಮ ನಮ್ಮ ಪ್ರಮುಖ ಆದ್ಯತೆಯಾಗಿದೆ.
TAGS:
Narendra Modi
ನರೇಂದ್ರ ಮೋದಿ
ಅಭಿಜೀತ್ ದೀಪ್ಕೆ
CJP
ಸಿಜೆಪಿ
Abhijeet Dipke
Delhi boys PG collapse
ದೆಹಲಿ ಬಾಲಕರ ಪಿಜಿ ಕುಸಿತ
E
E Tv News Desk
Senior Staff Journalist and Correspondent at ETV 24X7. Covering breaking global stories, contemporary culture, and modern innovations.