Home / ಮನೋರಂಜನೆ / ಸ್ಯಾಂಡಲ್‌ವುಡ್‌ಗೆ ಮತ್ತೊಂದು ಆಘಾತ: 100ಕ್ಕೂ...

ಸ್ಯಾಂಡಲ್‌ವುಡ್‌ಗೆ ಮತ್ತೊಂದು ಆಘಾತ: 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಶೈಲಜಾ ನಿಧನ

E
By E Tv News Desk
2026-09-07 2532 views 15 comments Edit Article

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದಾಗಿ ಬೆಂಗಳೂರಿನ ವೈಯ್ಯಾಲಿಕಾವಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಸ್ಯಾಂಡಲ್‌ವುಡ್‌ಗೆ ಮತ್ತೊಂದು ಆಘಾತ: 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಶೈಲಜಾ ನಿಧನ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದಾಗಿ ಬೆಂಗಳೂರಿನ ವೈಯ್ಯಾಲಿಕಾವಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಹಿರಿಯ ನಟ ಶ್ರೀಶೈಲನ್ ಪತ್ನಿಯಾಗಿದ್ದ ಶೈಲಜಾ ದಶಕಗಳ ಕಾಲ ಸ್ಯಾಂಡಲ್‌ವುಡ್ ಮತ್ತು ಕಿರುತೆರೆಯಲ್ಲಿ ಮಿಂಚಿದ್ದಾರೆ. 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ ನಟಿ ಶೈಲಜಾ ಶ್ರೀಶೈಲನ್ ಅವರು ಎ, ಉಪ್ಪಿ 2, ಅನಂತನ ಅವಾಂತರ, ಪುಟ್ಟ ಹೆಂಡ್ತಿ, ಗೃಹಪ್ರವೇಶ ಹಾಗೂ ಬಾರೆ ನನ್ನ ಮುದ್ದಿನ ರಾಣಿ ಸೇರಿದಂತೆ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದ್ರಲ್ಲೂ, ರಿಯಲ್ ಸ್ಟಾರ್ ಉಪೇಂದ್ರ ಅವರ ಬಹುತೇಕ ಚಿತ್ರಗಳಲ್ಲಿ ಶೈಲಜಾ ಅವರು ತಾಯಿ ಸೇರಿದಂತೆ ಪ್ರಮುಖ ಪೋಷಕ ಪಾತ್ರಗಳಿಗೆ ಜೀವ ತುಂಬಿ ಜನಪ್ರಿಯತೆ ಗಳಿಸಿದ್ದರು. ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ! ಮುಂದುವರೆದು, ಟಿ. ಎನ್. ಸೀತಾರಾಮ್ ನಿರ್ದೇಶನದ ಅತ್ಯಂತ ಜನಪ್ರಿಯ ಮೆಗಾ ಸೀರಿಯಲ್‌ಗಳಾದ ಮಾಯಾಮೃಗ ಮತ್ತು ಮುಕ್ತ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿ ಮನೆಮಾತಾಗಿದ್ದರು. ಏತನ್ಮಧ್ಯೆ, ಮೃತರು ಪುತ್ರ ಶ್ರೀಕಾಂತ್, ಪುತ್ರಿ ಶ್ರೀವಾಣಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
TAGS: Sandalwood Sandalwood Actress Mayamruga Shailaja passes
SHARE THIS ARTICLE
E

E Tv News Desk

Senior Staff Journalist and Correspondent at ETV 24X7. Covering breaking global stories, contemporary culture, and modern innovations.

RELATED ARTICLES

ETV 24X7 Live Search

Search Articles

Type any keyword to instantly search stories across categories.