ಹುಬ್ಬಳ್ಳಿಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಅದ್ಧೂರಿ, ಸಂಭ್ರಮದಿಂದ ನಡೆಯಿತು. ನಗರದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಭಕ್ತಸಾಗರವೇ ಹರಿದು ಬಂದಿತ್ತು.
ಈ ಬಾರಿಯ ಮೆರವಣಿಗೆಯ ಪ್ರಮುಖ ಆಕರ್ಷಣೆ ಅಂದರೆ ಹೆಣ್ಣುಮಕ್ಕಳ ಡ್ಯಾನ್ಸ್. ಗಂಡಸರಿಗಿಂತ ಹೆಣ್ಣುಮಕ್ಕಳು ಮತ್ತು ಚಿಕ್ಕ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಡಿಜೆ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದರು.
ಬಣ್ಣ ಬಣ್ಣದ ಉಡುಗೆಯಲ್ಲಿ ಕಂಗೊಳಿಸಿದ ಹೆಣ್ಣುಮಕ್ಕಳು ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದರು. ಭಕ್ತಿಯ ಜೊತೆಗೆ ಕುಣಿತ, ಸಂಭ್ರಮ ಮನೆ ಮಾಡಿತ್ತು. ಪೊಲೀಸ್ ಭದ್ರತೆಯ ನಡುವೆ ವಿಸರ್ಜನಾ ಮೆರವಣಿಗೆ ಶಾಂತಿಯುತವಾಗಿ, ಅದ್ಧೂರಿಯಾಗಿ ಮುಕ್ತಾಯವಾಯಿತು.