ಹುಬ್ಬಳ್ಳಿ ಸಮೀಪದ ತಾರಿಹಾಳ ಬಳಿ ಶಾಹಿ ಗಾರ್ಮೆಂಟ್ಸ್ ನೌಕರರು ಕೇಂದ್ರ ಸರ್ಕಾರದ ಹೊಸ ಭವಿಷ್ಯ ನಿಧಿ ನೀತಿಯನ್ನು ವಿರೋಧಿಸಿ ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಫ್ಯಾಕ್ಟರಿ ಕೆಲಸಕ್ಕೆ ಗೈರಾಗಿ ಬೀದಿಗಿಳಿದ ಸಾವಿರಾರು ಕಾರ್ಮಿಕರು, ಹೊಸ ಪಿಎಫ್ ನೀತಿ ಕೈಬಿಡುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಈ ಪ್ರತಿಭಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಧಾರವಾಡ ಎಸ್ ಪಿ, ಡಿವೈಎಸ್ಪಿ ಹಾಗೂ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣನವರ್ ಅವರು ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದರು. ಅಧಿಕಾರಿಗಳ ಭರವಸೆ ಬಳಿಕ ಕಾರ್ಮಿಕರು ಹೆದ್ದಾರಿ ತೆರವುಗೊಳಿಸಿದರು.